ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.