ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.