ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;