ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.