ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.