ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.