ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.
ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.
ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.