ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.