1
|
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ |
2
|
ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ. |
3
|
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು. |
4
|
ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು. |
5
|
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ. |
6
|
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ. |
7
|
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; |
8
|
ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. |
9
|
ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು; |
10
|
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. |
11
|
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. |
12
|
ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ. |
13
|
ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ. |
14
|
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. |
15
|
ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ. |
16
|
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ. |
17
|
ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ. |
18
|
ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್. |
2-Thessalonians 3:1 Kannada Language Bible Words basic statistical display
COMING SOON ...