ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.