ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).
ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.