1
|
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. |
2
|
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. |
3
|
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. |
4
|
ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, |
5
|
ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. |
6
|
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ. |
7
|
ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು. |
8
|
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. |
9
|
(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? |
10
|
ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). |
11
|
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ |
12
|
ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. |
13
|
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು. |
14
|
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು. |
15
|
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. |
16
|
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ. |
17
|
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; |
18
|
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. |
19
|
ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. |
20
|
ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. |
21
|
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ. |
22
|
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. |
23
|
ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. |
24
|
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. |
25
|
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. |
26
|
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; |
27
|
ಸೈತಾನನಿಗೆ ಅವಕಾಶ ಕೊಡಲೇಬೇಡಿರಿ. |
28
|
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು. |
29
|
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ. |
30
|
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. |
31
|
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ. |
32
|
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. |
Ephesians 4:21 Kannada Language Bible Words basic statistical display
COMING SOON ...