ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.