ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.