ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.