1
|
ಆಗ ಕರ್ತನು ಮಾತನಾಡಿ ಮೋಶೆಗೆ-- |
2
|
ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು. |
3
|
ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ |
4
|
ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು |
5
|
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು. |
6
|
ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ |
7
|
ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ. |
8
|
ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು. |
9
|
ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು. |
10
|
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. |
11
|
ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. |
12
|
ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. |
13
|
ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, |
14
|
ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. |
15
|
ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು. |
16
|
ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. |
17
|
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. |
18
|
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. |
19
|
ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. |
20
|
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. |
21
|
ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. |
22
|
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು. |
23
|
ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು. |
24
|
ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು. |
25
|
ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. |
26
|
ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು. |
27
|
ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು. |
28
|
ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. |
29
|
ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು. |
30
|
ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು. |
31
|
ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. |
32
|
ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. |
33
|
ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. |
34
|
ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. |
35
|
ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. |
36
|
ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. |
37
|
ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. |
38
|
ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. |
39
|
ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು. |
40
|
ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ. |
Exodus 25:1 Kannada Language Bible Words basic statistical display
COMING SOON ...