ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.
ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.