ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.
ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.