ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.