ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.
ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.