ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ
ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.
ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.