ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.