ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.