ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.