ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.