ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.