ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.