1
|
ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು. |
2
|
ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. |
3
|
ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. |
4
|
ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು. |
5
|
ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು. |
6
|
ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು. |
7
|
ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು. |
8
|
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು. |
9
|
ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು. |
10
|
ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು. |
11
|
ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು. |
12
|
ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. |
13
|
ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ |
15
|
ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. |
16
|
ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. |
17
|
ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. |
18
|
ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು. |
19
|
ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು. |
20
|
ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು. |
21
|
ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು. |
22
|
ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು. |
23
|
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು. |
24
|
ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು. |
25
|
ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು. |
26
|
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು. |
27
|
ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು. |
28
|
ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು. |
29
|
ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು. |
30
|
ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು. |
31
|
ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. |
32
|
ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. |
33
|
ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು. |
34
|
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು. |
Genesis 25:19 Kannada Language Bible Words basic statistical display
COMING SOON ...