ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.
ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.