ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.