1
|
ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ: |
2
|
ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ, |
3
|
ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು. |
4
|
ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು. |
5
|
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು. |
6
|
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು. |
7
|
ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. |
8
|
ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು. |
9
|
ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ: |
10
|
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು. |
11
|
ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್; |
12
|
ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ. |
13
|
ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು. |
14
|
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. |
15
|
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್ |
16
|
ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು. |
17
|
ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು. |
18
|
ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು. |
19
|
ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು. |
20
|
ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ |
21
|
ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು. |
22
|
ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ. |
23
|
ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್. |
24
|
ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ. |
25
|
ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು. |
26
|
ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್. |
27
|
ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್. |
28
|
ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್. |
29
|
ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ. |
30
|
ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು. |
31
|
ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ. |
32
|
ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ. |
33
|
ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು. |
34
|
ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು. |
35
|
ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್. |
36
|
ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. |
37
|
ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು. |
38
|
ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು. |
39
|
ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. |
40
|
ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ. |
42
|
ಕೆನಜ್ ತೇಮಾನ್ ಮಿಪ್ಚಾರ |
43
|
ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ. |
Genesis 36:12 Kannada Language Bible Words basic statistical display
COMING SOON ...