Indian Language Bible Word Collections
Genesis 36:43
Genesis Chapters
Genesis 36 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Genesis Chapters
Genesis 36 Verses
1
ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
2
ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
3
ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
4
ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
5
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
6
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
7
ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8
ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
9
ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
10
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
11
ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
12
ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
13
ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
14
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
15
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
16
ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
17
ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
18
ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
19
ಇವರು ಎದೋಮ್ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
20
ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
21
ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.
22
ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ.
23
ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್.
24
ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
25
ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26
ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್.
27
ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್.
28
ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್.
29
ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ.
30
ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
31
ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
32
ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ.
33
ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು.
34
ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು.
35
ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್.
36
ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.
37
ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.
38
ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು.
39
ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40
ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.
43
ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.