ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.