ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.