ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.