1
|
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ. |
2
|
ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ. |
3
|
ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು. |
4
|
ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು. |
5
|
ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು. |
6
|
ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು. |
7
|
ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು. |
8
|
ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ |
9
|
ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು. |
10
|
ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು. |
11
|
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. |
12
|
ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು. |
13
|
ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು. |
14
|
ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು. |
15
|
ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು. |
16
|
ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು. |
17
|
ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. |
18
|
ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. |
19
|
ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು. |
20
|
ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು. |
21
|
ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು. |
22
|
ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು. |
23
|
ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು. |
24
|
ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು. |
Genesis 7:21 Kannada Language Bible Words basic statistical display
COMING SOON ...