ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.