ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.