ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.