ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.