Indian Language Bible Word Collections
Isaiah 33:11
Isaiah Chapters
Isaiah 33 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Isaiah Chapters
Isaiah 33 Verses
1
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
2
ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
3
ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
4
ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
5
ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
6
ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
7
ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
8
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
9
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
10
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11
ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
12
ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
13
ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
14
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
15
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
16
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
17
ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
18
ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
19
ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
20
ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
21
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
22
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
23
ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.
24
ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.