ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.
ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.