1
|
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. |
2
|
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು. |
3
|
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. |
4
|
ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. |
5
|
ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ. |
6
|
ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. |
7
|
ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. |
8
|
ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು. |
9
|
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು. |
10
|
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ. |
11
|
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು. |
12
|
ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? |
13
|
ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? |
14
|
ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು? |
15
|
ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. |
16
|
ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. |
17
|
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ. |
18
|
ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? |
19
|
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. |
20
|
ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು. |
21
|
ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? |
22
|
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. |
23
|
ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. |
24
|
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು. |
25
|
ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ. |
26
|
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು. |
27
|
ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? |
28
|
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. |
29
|
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. |
30
|
ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು. |
31
|
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. |
Isaiah 40:23 Kannada Language Bible Words basic statistical display
COMING SOON ...