ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.