ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.