ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.