Indian Language Bible Word Collections
Job 16:3
Job Chapters
Job 16 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Job Chapters
Job 16 Verses
1
ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ--
2
ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
3
ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
4
ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
5
ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
6
ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
7
ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
8
ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ.
9
ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
10
ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
11
ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
12
ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
13
ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
14
ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
15
ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು.
16
ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ;
17
ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
18
ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
19
ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
20
ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
21
ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.
22
ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.