1
|
ಇನ್ನೂ ಹೆಚ್ಚಾಗಿ ಎಲೀಹು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ-- |
2
|
ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ. |
3
|
ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ. |
4
|
ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ. |
5
|
ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು. |
6
|
ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು. |
7
|
ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು? |
8
|
ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ. |
9
|
ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ. |
10
|
ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ. |
11
|
ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ. |
12
|
ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ. |
13
|
ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ? |
14
|
ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; |
15
|
ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು. |
16
|
ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು. |
17
|
ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ? |
18
|
ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? |
19
|
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ. |
20
|
ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ. |
21
|
ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. |
22
|
ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ. |
23
|
ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ. |
24
|
ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ. |
25
|
ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. |
26
|
ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. |
27
|
ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. |
28
|
ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ. |
29
|
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ. |
30
|
ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ. |
31
|
ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. |
32
|
ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು. |
33
|
ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ. |
34
|
ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ. |
35
|
ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ. |
36
|
ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ. |
37
|
ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ. |
Job 34:1 Kannada Language Bible Words basic statistical display
COMING SOON ...