Indian Language Bible Word Collections
Job 40:1
Job Chapters
Job 40 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Job Chapters
Job 40 Verses
1
|
ಕರ್ತನು ಯೋಬನಿಗೆ ಉತ್ತರ ಕೊಟ್ಟು-- |
2
|
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು. |
3
|
ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- |
4
|
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. |
5
|
ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು. |
6
|
ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು-- |
7
|
ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. |
8
|
ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? |
9
|
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? |
10
|
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. |
11
|
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. |
12
|
ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. |
13
|
ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು. |
14
|
ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು. |
15
|
ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ. |
16
|
ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು. |
17
|
ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ. |
18
|
ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ. |
19
|
ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು. |
20
|
ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ. |
21
|
ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ. |
22
|
ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. |
23
|
ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ. |
24
|
ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ. |