ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.